
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈ ವರ್ಷ ಗಣೇಶ ಹಬ್ಬದ ಆಚರಣೆಗೆ ಭರ್ಜರಿ ತಯಾರಿ ನಡೆಸಲಾಗಿದೆ. ಆದರೆ ಡಿಜೆ ಬಳಕೆ ಬಗ್ಗೆ ಸಾಕಷ್ಟು ಗೊಂದಲಗಳು ಇದ್ದವು, ಆದರೆ ಇದಕ್ಕೆ ಸಚಿವ ಶಿವರಾಜ ತಂಗಡಗಿ ತೆರೆ ಏಳೆದಿದ್ದಾರೆ.
ಈ ಬಗ್ಗೆ ಮಾತನಾಡಿದ ಸಚಿವ ಶಿವರಾಜ್ ತಂಗಡಗಿ ಅವರು, ರಾಜ್ಯದಲ್ಲಿ ಗಣೇಶ ಹಬ್ಬದ ವೇಳೆ ಡಿಜೆ ಬಳಕೆಯನ್ನು ಸರ್ಕಾರ ನಿಷೇಧಿಸಿತ್ತು. ಆದರೆ ಬಿಜೆಪಿಯವರು ಇದರಲ್ಲಿ ರಾಜಕೀಯ ಮಾಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.
ಗಣೇಶ ಹಬ್ಬದಲ್ಲಿ ಡಿಜೆ ನಿಷೇಧಿಸಿದ್ದಾರೆ ಎಂದು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರ ಮಾತನ್ನು ಕೇಳಬೇಡಿ. ಬಿಜೆಪಿಯವರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೋರ್ಟ್ ನ ಮಾರ್ಗಸೂಚಿಯಂತೆ ಎಷ್ಟು ಡಿಸಿಬಲ್ ಇರಬೇಕೋ ಅಷ್ಟು ಇದ್ದಾರೆ ಸಾಕು ಎಂದು ಶಿವರಾಜ್ ತಂಗಡಗಿ ತಿಳಿಸಿದರು.
ಗಣೇಶ ಹಬ್ಬದ ವೇಳೆ ಡಿಜೆ ಬಳಕೆ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿತ್ತು. ಈ ಬಗ್ಗೆ ಸದನದಲ್ಲಿ ಹಾಗೂ ಸಾರ್ವಜನಿಕರು ಆಕ್ರೋಶ ಹೊರಹಾಕಿದ ಬೆನ್ನಲ್ಲೇ ಆದೇಶವನ್ನು ವಾಪಸ್ ಪಡೆಯಲಾಗಿದೆ.