ವೀಡಿಯೋ ನೋಡಿ –
ಪ್ರಗತಿವಾಹಿನಿ ಸುದ್ದಿ, ಚನ್ನಮ್ಮನ ಕಿತ್ತೂರು : ವಿದ್ಯಾಭ್ಯಾಸಕ್ಕೆ ಆಗಮಿಸಿದ ವಿದ್ಯಾರ್ಥಿಗಳಿಗೆ ಮರಳಿ ತಮ್ಮ ಊರಿಗೆ ಹೋಗಲು ಬಸ್ ಇಲ್ಲದ ಪರಿಣಾಮ ಗುರುವಾರ ರಾತ್ರಿ ಸ್ಥಳಿಯ ಬಸ್ ನಿಲ್ದಾಣದಲ್ಲಿ ತೀವ್ರ ಪ್ರತಿಭಟನೆ ನಡೆಸಿದರು.
ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಿಂದ ಪ್ರತಿದಿನ ವಿದ್ಯಾಭ್ಯಾಸಕ್ಕೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ಕೆಲವು ದಿನಗಳಿಂದ ಬಸ್ಸಿನ ಸಮಸ್ಯೆ ಎದುರಾಗಿದ್ದು, ಯಾವುದೇ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಕಡೆ ಗಮನ ಹರಿಸುತ್ತಿಲ್ಲ. ಕಳೆದ ಒಂದು ವಾರದಿಂದ ಬಸ್ ನಿಲ್ದಾಣದ ನಿಯಂತ್ರಣಾಧಿಕಾರಿ ಕೂಡ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಳು ೨ ಗಂಟೆ ಕಾಲ ಪ್ರತಿಭಟನೆ ನಡೆಸಿದರು. ಧಾರವಾಡ, ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ ಸುಮಾರು ೧೦ ಕ್ಕೂ ಹೆಚ್ವು ಬಸ್ಗಳನ್ನು ನಿಲ್ದಾಣದ ಒಳಗೆ ತಡೆದು ಪ್ರತಿಭಟನೆ ನಡೆಸಿದರು.
ಸ್ಥಳಕ್ಕೆ ಕಿತ್ತೂರು ಪೊಲೀಸರು ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಫೋನ್ ಮುಖಾಂತರ ಸಮಸ್ಯೆಗಳನ್ನು ಹೇಳಿ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಮಾಡಿದರು.
ನಮ್ಮೂರಿಗೆ ಕಳೆದ ಒಂದು ವರ್ಷದಿಂದ ಯಾವುದೇ ಬಸ್ಸಿನ ವ್ಯವಸ್ಥೆ ಸರಿಯಾಗಿ ಇಲ್ಲ. ಅಧಿಕಾರಿಗಳು, ಜನಪ್ರತಿನಿಧಿಗಳು ಇನ್ನಾದರೂ ಬಸ್ಸಿನ ವ್ಯವಸ್ಥೆ ಮಾಡಬೇಕು. ಇಲ್ಲವಾದರೆ ಉಗ್ರ ಹೋರಾಟ ಮಾಡಲಾಗುವುದು.-ಅಶ್ವಿನಿ ವಿದ್ಯಾರ್ಥಿನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ