Kannada NewsKarnataka NewsLatest

ಜುಲೈ 31ರ ವರೆಗೆ ತ್ರಿ ದೇವಿಯರ ದರ್ಶನವಿಲ್ಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕೊರೋನಾ ಹಿನ್ನೆಲೆಯಲ್ಲಿ ಮುಚ್ಚಲ್ಪಟ್ಟಿರುವ ಬೆಳಗಾವಿ ಜಿಲ್ಲೆಯ 3 ದೇವಸ್ಥಾನಗಳ ಬಾಗಿಲು ಇನ್ನೂ ಒಂದು ತಿಂಗಳು ತೆರೆಯುವುದಿಲ್ಲ.

ಸವದತ್ತಿ ಯಲ್ಲಮ್ಮ, ಚಿಂಚಲಿ ಮಾಯಕ್ಕ ಹಾಗೂ ಜೋಗಳಬಾವಿ ಸತ್ತೆಮ್ಮ ದೇವಸ್ಥಾನಗಳಲ್ಲಿ ಜುಲೈ 31ರ ವರೆಗೂ ದರ್ಶನಕ್ಕೆ ಅವಕಾಶ ನೀಡದಂತೆ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಳ್ಳಿ ಆದೇಶ ಹೊರಡಿಸಿದ್ದಾರೆ.

ಈ ಮೊದಲು ಜೂನ್ 3ದರ ವರೆಗೆ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನವಿಲ್ಲ ಎಂದು ಆದೇಶಿಸಲಾಗಿತ್ತು. ಇಂದು ಜಿಲ್ಲಾಧಿಕಾರಿಗಳು ಹೊಸ ಆದೇಶ ಹೊರಡಿಸಿದ್ದು, ಮತ್ತೂ ಒಂದು ತಿಂಗಳು ವಿಸ್ತರಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button