Latest

ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾಂಗ್ರೆಸ್ ಸಿದ್ಧತೆ; ರಾಜಿನಾಮೆಗೆ ಆಗ್ರಹ

ರಾಜಧಾನಿಯಲ್ಲಿ ತೀವ್ರಗೊಂಡ ಕಾಂಗ್ರೆಸ್ ಪ್ರತಿಭಟನೆ

https://youtu.be/JtR-6oiF3R8


ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆಯಲ್ಲಿ ಕೋಟಿ ಕೊಟಿ ಹಣ ಪತ್ತೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

Home add -Advt

ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ ನಡೆಸಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳುರಿನ ಕೆಪಿಸಿಸಿ ಕಚೇರಿ ಬಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲ ನೇತೃತ್ವದಲ್ಲಿ ಕೈ ಕಾರ್ಯಕರ್ತರ ಪ್ರತಿಭಟನೆ ಆರಂಭವಾಗಿದ್ದು, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ ಎಂದು ಒತ್ತಾಯಿಸಿದ್ದಾರೆ.

ಶಾಸಕರ ಮಗನ ಮನೆಯಲ್ಲಿಯೇ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಇನ್ನು ಸಚಿವರುಗಳ ಮನೆಯಲ್ಲಿ ಎಷ್ಟು ಇರಬೇಕು? ಎಲ್ಲವೂ ಸಂಪೂರ್ಣ ತನಿಖೆಯಾಗಲಿ. ಹಣ ಬಲದ ಮೂಲಕ ಬಿಜೆಪಿ ನಾಯಕರು ಚುನಾವಣೆ ಗೆಲ್ಲಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

Back to top button