Kannada NewsKarnataka NewsPolitics

*ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ: ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಕೇಂದ್ರ ಸರ್ಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರದ ಹಣವನ್ನು ಸಾಲಕ್ಕೆ ಬ್ಯಾಂಕ್‍ಗಳು ಜಮೆ ಮಾಡಿಕೊಳ್ಳುತ್ತಿವೆ ಎಂದು ಟ್ವಿಟ್ ಮೂಲಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಖಂಡಿಸಿದ್ದಾರೆ.

Home add -Advt

ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಹೆಚ್‍ಡಿಕೆ, ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ. ಹೆಸರಿಗೆ ಮಾತ್ರ ಅನ್ನದಾತ. ಆದರೆ, ರೈತರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಆರೋಪಿಸಿದ್ದಾರೆ.

ರೈತರ ಬ್ಯಾಂಕ್ ಖಾತೆಗೆ ಜಮೆಯಾಗಿದ್ದ ಬರ ಪರಿಹಾರದ ಹಣವನ್ನು ಸಾಲಕ್ಕೆ ಜಮೆ ಮಾಡಲಾಗುತ್ತಿದೆ. ಬ್ಯಾಂಕ್‍ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ ಎಂದು ಹೆಚ್‍ಡಿಕೆ ಟೀಕಿಸಿದ್ದಾರೆ.

ಮೊದಲೇ ತೀವ್ರ ಬರ ಹಾಗೂ ಬೆಳೆನಾಶದಿಂದ ಕಂಗೆಟ್ಟಿರುವ ರೈತರ ಕಣ್ಣಲ್ಲಿ ರಕ್ತ ಕಣ್ಣೀರು ತರಿಸುವ ಅಮಾನವೀಯ ಕ್ರಮ ಇದು ಎಂದರೆ ತಪ್ಪಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್‍ಗಳ ಮುಖ್ಯಸ್ಥರ ಸಭೆ ಕರೆದು, ಗಂಭೀರ ಚರ್ಚೆ ಮಾಡಬೇಕು. ಬರ ಪರಿಹಾರದ ಮೊತ್ತವನ್ನು ಸಾಲಕ್ಕೆ ಹಮೆ ಮಾಡಬಾರದು ಎಂದು ಬ್ಯಾಂಕ್‍ಗಳಿಗೆ ಸರ್ಕಾರ ತಾಕೀತು ಮಾಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

Related Articles

Back to top button