*ಗಣೇಶೋತ್ಸವದ ಆಚರಣೆ ಬಗ್ಗೆ ಬಿಜೆಪಿಗರು ಪಾಠ ಹೇಳುವ ಅಗತ್ಯವಿಲ್ಲ: ಯತೀಂದ್ರ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕೋಮು ಸಂಘರ್ಷದ ಸಂದರ್ಭಗಳನ್ನು ರಾಜಕೀಯವಾಗಿ ಬಳಸಿಕೊಳ್ಳಲು ಬಿಜೆಪಿ ಮುಂದಾಗುತ್ತದೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ
ಟಿ.ನರಸೀಪುರದಲ್ಲಿ ಗಣೇಶ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ನೀಡಿದ್ದ ಸೂಚನೆಗಳನ್ನೂ ಯತೀಂದ್ರ ಸಿದ್ದರಾಮಯ್ಯ ಸಮರ್ಥಿಸಿಕೊಂಡ ಅವರು, ಮೆರವಣಿಗೆ ನಡೆಸಲು ಸ್ಥಳೀಯ ಆಡಳಿತದ ಅನುಮತಿ ಪಡೆಯಬೇಕು. ಅನುಮತಿ ಇಲ್ಲದೆ ಕಾರ್ಯಕ್ರಮ ನಡೆದರೆ ಯಾವುದೇ ಅಹಿತಕರ ಘಟನೆ ಸಂಭವಿಸಿದ ಸಂದರ್ಭದಲ್ಲಿ ಹೊಣೆ ಯಾರು ಎಂಬ ಕಾರಣಕ್ಕೆ ಪೊಲೀಸರು ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಮೆರವಣಿಗೆಗೆ ಸಂಬಂಧಿಸಿದ ವಿವಾದವನ್ನು ದೊಡ್ಡದಾಗಿ ಬಿಂಬಿಸಲಾಗುತ್ತಿದೆ. ಎಲ್ಲ ಧರ್ಮಗಳಿಗೂ ಒಂದೇ ರೀತಿಯ ನಿಯಮಗಳು ಅನ್ವಯಿಸುತ್ತವೆ. ದೇವಸ್ಥಾನಗಳ ಬಳಿ ಪಟಾಕಿ ಸಿಡಿಸುವ ವಿಚಾರವಾಗಲಿ, ಚರ್ಚ್ ಅಥವಾ ಮಸೀದಿ ಸುತ್ತಮುತ್ತ ನಡೆಯುವ ಕಾರ್ಯಕ್ರಮಗಳಾಗಲಿ, ನಿಯಮಾನುಸಾರ ಅನುಮತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಗಣೇಶೋತ್ಸವದ ಆಚರಣೆ ಕುರಿತು ಬಿಜೆಪಿ ನಾಯಕರು ಪಾಠ ಹೇಳುವ ಅಗತ್ಯವಿಲ್ಲ. ಲೋಕಮಾನ್ಯ ತಿಲಕರು ಆರಂಭಿಸಿದ ಗಣೇಶೋತ್ಸವದ ಇತಿಹಾಸವನ್ನು ನೆನಪಿಸಿದ್ದಾರೆ. ಸಂವಿಧಾನ ಮತ್ತು ಕಾನೂನು ಪಾಲನೆಯ ವಿಚಾರದಲ್ಲೂ ಬಿಜೆಪಿ ತಮ್ಮಗೆ ಉಪದೇಶ ನೀಡಬೇಕಿಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.



