*ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ರಾಜಕೀಯ ಇಲ್ಲ: ಬಾಲಚಂದ್ರ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಯಾವುದೇ ರಾಜಕೀಯ ಮಾಡದೆ, ರೈತರ ಅನುಕೂಲಕ್ಕಾಗಿ ನಿಪ್ಪಾಣಿಯಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಆಯ್ಕೆ ಮಾಡಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಅಪಾಚಿವಾಡಿ ಗ್ರಾಮದ ಹಾಲ್ಸಿದ್ದನಾಥ ಸಭಾಭವನದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ ನಿರ್ದೇಶಕ, ಮಂಡಳಿ ಸದಸ್ಯರು ಹಾಗೂ ಕಾರ್ಯದರ್ಶಿಗಳ ಸೌಹಾರ್ದಯುತ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಡಿಸಿಸಿ ಬ್ಯಾಂಕಿನ ಚುನಾವಣೆಯು ಸಹಕಾರ ಕ್ಷೇತ್ರದ ಚುನಾವಣೆಯಾಗಿದ್ದು, ಇದರಲ್ಲಿ ಯಾವುದೆ ರಾಜಕೀಯ ಇಲ್ಲ ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ ರೈತರ ಅಭಿವೃದ್ಧಿಯೇ ಮೂಲ ಉದ್ದೇಶವಾಗಿದೆ. ಹಲವಾರು ವರ್ಷಗಳಿಂದ ಒಳ್ಳೆಯ ರೀತಿಯಾಗಿ ಕೆಲಸವನ್ನು ಮಾಡಿಕೊಂಡು ಬರುತ್ತಿದೇವೆ. ಇದು ಸಹಕಾರ ಕ್ಷೇತ್ರ ಇರುವುದರಿಂದ ಇಲ್ಲಿ ಯಾವುದೇ ರೀತಿಯಾದ ರಾಜಕೀಯ ಇರುವುದಿಲ್ಲ ಎಂದರು.
ಇದರಲ್ಲಿ ರಾಜಕೀಯ ತರುವುದು ಸಮಂಜಸವಲ್ಲ.ಅಣ್ಣಾಸಾಹೇಬ ಜೊಲ್ಲೆಯವರು ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಉಳ್ಳವರಾಗಿದ್ದಾರೆ. ಅವರ ಮಾರ್ಗದರ್ಶನ ಡಿಸಿಸಿ ಬ್ಯಾಂಕಿಗೆ ಅತ್ಯಂತ ಅವಶ್ಯಕ ಇದೆ. ಈ ನಿಟ್ಟಿನಲ್ಲಿ ಅವರನ್ನು ನಿಪ್ಪಾಣಿ ತಾಲೂಕಿನಿಂದ ಅವರನ್ನು ಆಯ್ಕೆ ಮಾಡಬೇಕೆಂದು ತಮ್ಮಲ್ಲಿ ನಾನು ಮನವಿಯನ್ನು ಮಾಡಿಕೊಳ್ಳುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ ನೀಡಿದರು.