Kannada NewsKarnataka NewsNationalPolitics

*ಎಸ್.ಪಿ.ಪಿ ಬದಲಾವಣೆ ಬಗ್ಗೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರೇಣುಕಸ್ವಾಮಿ ಕೊಲೆ ಪ್ರಕರಣದ ಎಸ್.ಪಿ.ಪಿ ಅವರನ್ನು ಬದಲಾವಣೆ ಮಾಡಲು ನನ್ನ ಮೇಲೆ ಯಾವ ಸಚಿವರ, ಶಾಸಕರ ಒತ್ತಡವಿಲ್ಲ .ನನ್ನ ಮೇಲೆ ಒತ್ತಡ ಹಾಕಿದರೆ ಕೇಳುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Home add -Advt

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಅಭಿಯೋಜಕರನ್ನು ಬದಲಾಯಿಸಲು ಒತ್ತಡ ಹಾಕಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಪ್ರತಿಕ್ರಿಯೆ ನೀಡಿದರು.

ಕಾನೂನಿನ ಪ್ರಕಾರ ಕ್ರಮ

ಮಾಧ್ಯಮಗಳಲ್ಲಿ ಈ ಬಗ್ಗೆ ಬಿತ್ತರವಾಗುತ್ತಿರುವುದು ಸುಳ್ಳು ಹಾಗೂ  ಸತ್ಯಕ್ಕೆ ದೂರವಾದುದು. ಕಾನೂನು ಏನು ಹೇಳುತ್ತದೆಯೋ ಅದನ್ನೇ ಮಾಡುತ್ತೇವೆ ಎಂದರು. ಪೊಲೀಸ್ ನವರಿಗೆ ಪ್ರಕರಣದಲ್ಲಿ ಎಲ್ಲಾ ಸ್ವಾತಂತ್ರ್ಯ ವನ್ನೂ ನೀಡಿದ್ದು, ಕಾನೂನಿನ ಪ್ರಕಾರ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು.

Related Articles

Back to top button