ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ
ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಣ್ಣಾ ಸಾಹೇಬ ಜೊಲ್ಲೆ ಬುಧವಾರ ತಮ್ಮ ನಾಮಪತ್ರ ಸಲ್ಲಿಸಿದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಮಾಜಿ ಸಚಿವ ಉಮೇಶ ಕತ್ತಿ, ವಿಧಾನಪರಿಷತ್ ವಿರೋಧ ಪಕ್ಷದ ಸಚೇತಕ ಮಹಾಂತೇಶ ಕವಟಗಿಮಠ, ಶಾಸಕಿ, ಪತ್ನಿ ಶಶಿಕಲಾ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ ಮೊದಲಾದವರೊಂದಿಗೆ ಆಗಮಿಸಿದ ಅಣ್ಣಾ ಸಾಹೇಬ ಜೊಲ್ಲೆ ಚುನಾವಣಾಧಿಕಾರಿ ರಾಜೇಂದ್ರ ಕೆ.ವಿ.ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಇಂದೆ ಸಂಜೆ 4 ಗಂಟೆಗೆ ಬಿಜೆಪಿ ಪ್ರಚಾರ ಸಮಾವೇಶ ಸಂಘಟಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದಾರೆ.