Kannada NewsKarnataka NewsNationalPolitics

*ಕರ್ನಾಟಕ ಬಂದ್‌ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ವಾಟಾಳ್ ನಾಗರಾಜ್*

ಪ್ರಗತಿವಾಹಿನಿ ಸುದ್ದಿ: ಕಾವೇರಿ ವಿಚಾರದಲ್ಲಿ ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರು, ರಾಜಕೀಯ ಪಕ್ಷಗಳು ಮತ್ತು ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ. ಆದರೂ ಕರ್ನಾಟಕ ಬಂದ್‌ ನಿರ್ಧಾರದಿಂದ ಹಿಂದೆ ಸರಿಯುವ ಯಾವುದೇ ಪ್ರಶ್ನೆಯೇ ಇಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂದ್‌ ಆಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಹಾಗೂ ಪೂರ್ಣ ಪ್ರಮಾಣದಲ್ಲಿ ಬಂದ್‌ ನಡೆಸಿಯೇ ಸಿದ್ಧ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಂದರೂ ಅವರಿಗೆ ವೀಳ್ಯದೆಲೆ ನೀಡಿ ಗೌರವದಿಂದ ಸ್ವಾಗತಿಸುತ್ತೇವೆ ಎಂದರು.

ಆದರೆ ರಾಜ್ಯದಲ್ಲಿ ಮಳೆಯಾಗಿದೆ ಎಂಬ ಒಂದೇ ಕಾರಣಕ್ಕೆ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ, ಮೊದಲು ನಮ್ಮ ರಾಜ್ಯದ ನಾಲೆಗಳಿಗೆ ನೀರು ಹರಿಸಿ ರೈತರ ಹಿತ ಕಾಯಬೇಕು ಎಂದು ಅವರು ಆಗ್ರಹಿಸಿದರು. ಈ ಬಂದ್ ಸಾರ್ವಜನಿಕರಿಗೆ ಅಥವಾ ಯಾರಿಗೂ ನಷ್ಟ ಉಂಟುಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button