ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಿಲ್ಲೆಯಲ್ಲಿ ಕೋವಿಡ್ 19 ರ ಕೋರೋನ ಲಸಿಕ ಅಭಿಯಾನವು ಪ್ರಗತಿಯಲ್ಲಿದ್ದು, ಈಗಾಗಲೇ ಜಿಲ್ಲೆಯಲ್ಲಿ 6,24,485 ಫಲಾನುಭವಿಗಳಿಗೆ ಲಸಿಕೆಯನ್ನು ನೀಡಲಾಗಿರುತ್ತದೆ.
ಜಿಲ್ಲೆಯಲ್ಲಿ ಕೋವಿಶೀಲ್ಡ್ ಹಾಗೂ ಕೋ ವ್ಯಾಕ್ಸಿನ್ ಲಸಿಕೆಯನ್ನು ಫಲಾನುಭವಿಗಳಿಗೆ ನೀಡಲಾಗುತ್ತಿದೆ.
ಕೋವಿಶೀಲ್ಡ್ ಲಸಿಕೆ ಪಡೆದವರು ಎರಡನೇ ಡೋಜ್ ಅನ್ನು ಮೊದಲ ಲಸಿಕೆ ಪಡೆದ 42 ದಿನಗಳ ನಂತರ ಪಡೆಯುವುದು.
ಅದೇ ರೀತಿ ಕೋವ್ಯಾಕ್ಸಿನ್ ಲಸಿಕೆ ಪಡೆದವರು ಎರಡನೇ ಡೋಜನ್ನು 28 ದಿನಗಳ ನಂತರ ಪಡೆಯುವುದು.
ಸದ್ಯಕ್ಕೆ ಜಿಲ್ಲೆಯಲ್ಲಿ ಎರಡನೇ ಡೋಜ್ ಲಸಿಕೆಯನ್ನು ಮಾತ್ರ ನೀಡಲಾಗುತ್ತಿದೆ.
ಮೊದಲ ಡೋಸ್ ಲಸಿಕೆ ಪಡೆಯುವ ಅರ್ಹ ಫಲಾನುಭವಿಗಳಿಗೆ ನಂತರದ ದಿನಗಳಲ್ಲಿ ಜಿಲ್ಲೆಯ ಆರೋಗ್ಯ ಸಂಸ್ಥೆಗಳಲ್ಲಿ ಲಸಿಕೆಯನ್ನು ನೀಡಲಾಗುವುದು. ಮೊದಲನೆಯ ಡೋಜ್ ಲಸಿಕೆಯನ್ನು ನೀಡುವ ದಿನಾಂಕವನ್ನು ತಿಳಿಸಲಾಗುವುದು.
ಜಿಲ್ಲೆಯ ಎಲ್ಲ ಸಾರ್ವಜನಿಕರು ಕೊರೊನಾ ನಿಯಮ ಗಳಾದ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸ್ಯಾನಿಟೈಸರ್ ಬಳಕೆ ಮಾಡುವುದು.
ಯಾವುದೇ ಸಭೆ-ಸಮಾರಂಭಗಳಲ್ಲಿ ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ತಾಯಿ, ಮಕ್ಕಳ ಸಂತಾನೋತ್ಪತ್ತಿ ಹಾಗೂ ಲಸಿಕಾ ಅಧಿಕಾರಿಗಳಾದ ಡಾ. ಈಶ್ವರ ಗಡಾದ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ ಶಶಿಕಾಂತ ವಿ. ಮುನ್ಯಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ