Kannada NewsKarnataka News
ಬೆಳಗಾವಿ ರೋಡ್ ಶೋ ಅಭೂತಪೂರ್ವ ಎನ್ನುವುದಕ್ಕೆ ಈ ಚಿತ್ರಗಳೇ ಸಾಕ್ಷಿ; ಬೆಳಗಾವಿಯ ಜನರು ನೀಡಿದ ಪ್ರೀತಿಯನ್ನು ಬಡ್ಡಿ ಸಮೇತ ಹಿಂದಿರುಗಿಸುವೆ ಎಂದ ಮೋದಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಜಲಜೀವನ ಮಿಷನ್ ಯೋಜನೆಗೆ ಶಂಕುಸ್ಥಾಪನೆ, ನವೀಕೃತ ರೈಲ್ವೆ ನಿಲ್ದಾಣ ಮೇಲ್ದರ್ಜೆಗೇರಿಸುವಿಕೆ, ಲೊಂಡ -ಬೆಳಗಾ ವಿ-ಘಟಪ್ರಭಾ ಮಾರ್ಗದ ಡಬ್ಲಿಂಗ್ ಕಾಮಗಾರಿ ಸೇರಿದಂತೆ 2240 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಳಗಾವಿಯ ಹೊರವಲಯದ ಮಾಲಿನಿ ಸಿಟಿ ಮೈದಾನಲ್ಲಿ ಏರ್ಪಡಿಸಿದ್ದ ಬೃಹತ್ ಕಾರ್ಯಕ್ರಮದಲ್ಲಿ ಸೋಮವಾರ ರಾಷ್ಟ್ರಕ್ಕೆ ಸಮರ್ಪಿಸಿದರು.
ಅಂತಾರಾಷ್ಟ್ರೀಯ ಸಿರಿ ಧಾನ್ಯ ಮೇಳದ ನೆನಪಿನಾರ್ಥ ಸಿರಿಧಾನ್ಯಗಳನ್ನು ಮಡಿಕೆಗೆ ತುಂಬುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ 13ನೇ ಕಂತಿನ 16800 ಕೋಟಿ ರೂ.ಹಣವನ್ನು ಎಂಟು ಕೋಟಿಗೂ ಅಧಿಕ ರೈತರಿಗೆ ನೇರ ನಗದು ವರ್ಗಾವಣೆ ಮುಖಾಂತರ ವರ್ಗಾಯಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ನರೇಂದ್ರಸಿಂಗ್ ತೋಮರ್,ಶೋಭಾ ಕರಂದ್ಲಾಜೆ, ರಾಜ್ಯದ ಸಚಿವರಾದ ಗೋವಿಂದ ಕಾರಜೋಳ,ಬಿ.ಸಿ.ಪಾಟೀಲ್,ಶಶಿಕಲಾ ಜೊಲ್ಲೆ, ಸಂಸದರಾದ ಮಂಗಳಾ ಸುರೇಶ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರಾದ ಮಹೇಶ ಕುಮಠಳ್ಳಿ,ಪಿ.ರಾಜೀವ,ದುರ್ಯೋಧನ ಐಹೊಳೆ, ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ, ಅಭಯ್ ಪಾಟೀಲ, ಮಹದೇವಪ್ಪ ಯಾದವಾಡ, ಶ್ರೀಮಂತ್ ಪಾಟೀಲ, ಅನಿಲ ಬೆನಕೆ, ಮಹಾಂತೇಶ ದೊಡ್ಡಗೌಡರ್, ಲಕ್ಷ್ಮಣ ಸವದಿ, ಹನುಮಂತ ನಿರಾಣಿ, ಡಾ.ಸಾಬಣ್ಣ ತಳವಾರ, ಸೇರಿದಂತೆ ಇನ್ನಿತರರು ಇದ್ದರು.
ಕಾರ್ಯಕ್ರಮಕ್ಕೂ ಮುನ್ನ ಬೆಳಗಾವಿಯಲ್ಲಿ ಸುಮಾರು 10.ಕಿ.ಮೀ ಗಳಿಗೂ ಅಧಿಕ ಮಾರ್ಗದಲ್ಲಿ ಪ್ರಧಾನಮಂತ್ರಿಗಳ ರೋಡ್ ಶೋ ನಡೆಯಿತು.
ನಗರದ ಕೆ.ಎಸ್.ಆರ್.ಪಿ ಮೈದಾನದಿಂದ ಅರಂಭವಾದ ಪ್ರಧಾನಮಂತ್ರಿಗಳ ರೋಡ್ ಶೋ ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಕಾಲೇಜು ರಸ್ತೆ ಮಾರ್ಗವಾಗಿ ನಗರದ ಹೊರವಲಯದ ಮಾಲಿನಿಸಿಟಿ ಮೈದಾನದವರೆಗೆ ನಡೆಯಿತು. ದಾರಿಯುದ್ದಕ್ಕೂ ಕುಂದಾನಗರಿಯ ಅಪಾರ ಜನಸ್ತೋಮ ಸಾಗರೋಪಾದಿಯಲ್ಲಿ ನೆರೆದು ಪ್ರಧಾನಮಂತ್ರಿಗಳನ್ನು ಹರ್ಷೋದ್ಘಾರಗಳಿಂದ ಸ್ವಾಗತಿಸಿದರು.
ಪ್ರಮುಖ ವೃತ್ತಗಳಲ್ಲಿ ಪುಷ್ಪಾರ್ಚನೆಗೈದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಲಕ್ಷಾಂತರ ಜನರು ಜಯಕಾರ ಹಾಕಿದರು.
ಬೆಳಗಾವಿಯ ಜನರು ನೀಡಿದ ಪ್ರೀತಿಯನ್ನು ಬಡ್ಡಿ ಸಮೇತ ಹಿಂದಿರುಗಿಸುವೆ. ಕರ್ನಾಟಕ ಹಾಗೂ ಬೆಳಗಾವಿಯ ಅಭಿವೃದ್ದಿಯೊಂದಿಗೆ ನಿಮ್ಮ ಪ್ರೀತಿಯ ಋಣ ತೀರಿಸುವೆ ಎಂದು ಪ್ರಧಾನಮಂತ್ರಿ ಅವರು ಭರವಸೆ ನೀಡಿದರು.
ವೇಣುಗ್ರಾಮ ಎಂಬ ಖ್ಯಾತಿಯನ್ನು ಬೆಳಗಾವಿ ಹೊಂದಿದೆ. ನಮ್ಮ ಸರಕಾರವು ಬಿದಿರು ಬೆಳೆ ಹಾಗೂ ಕಟಾವಿಗೆ ಅನುಮತಿ ನೀಡಿರುವುದರಿಂದ ಈ ಭಾಗದ ಕರಕುಶಲ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದೂ ಹೇಳಿದರು.
ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಯಿಂದ ಬೆಳಗಾವಿಯ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದರು.
ನಮ್ಮ ಸರಕಾರದ “ಸಬ್ ಕಾ ಸಾಥ್ – ಸಬ್ ಕಾ ವಿಕಾಸ್” ಮಂತ್ರಕ್ಕೆ ಸ್ಫೂರ್ತಿಯಾಗಿರುವ ಬಸವಣ್ಣನವರಿಗೆ ನಮಸ್ಕಾರಗಳು..
ಬೆಳಗಾವಿಯ ನನ್ನ ಬಂಧು-ಭಗಿನಿಯರಿಗೆ ನನ್ನ ನಮಸ್ಕಾರಗಳು.. ಎಂದು ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಾತು ಆರಂಭಿಸಿದರು.
ಬೆಳಗಾವಿಯ ಜನರ ಆಶೀವಾರ್ದವು ನಮಗೆ ಪ್ರೇರಣಾಶಕ್ತಿಯಾಗಿದೆ. ಈ ನೆಲಕ್ಕೆ ಬರುವುದು ಯಾವುದೇ ತೀರ್ಥ ಯಾತ್ರೆಗಿಂತ ಕಡಿಮೆಯಲ್ಲ.
ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನ ಜನ್ಮಭೂಮಿಯಾಗಿದೆ. ಗುಲಾಮಗಿರಿ ವಿರುದ್ಧ ಹೋರಾಟ ಹಾಗೂ ನವಭಾರತ ನಿರ್ಮಾಣದಲ್ಲಿ ಬೆಳಗಾವಿಯ ಪಾತ್ರ ಪ್ರಮುಖವಾಗಿದೆ.
ರಾಜ್ಯದಲ್ಲಿ ಸ್ಟಾರ್ಟ್ ಅಪ್ ಗಳ ಚರ್ಚೆಯಾಗುತ್ತಿದೆ. ಬೆಳಗಾವಿಯಲ್ಲಿ ನೂರು ವರ್ಷಗಳ ಹಿಂದೆಯೇ ಸ್ಟಾರ್ಟ್ ಅಪ್ ಆರಂಭಗೊಂಡಿತ್ತು. ಅಂದು ಬೆಳಗಾವಿಯಲ್ಲಿ ಬಾಬುರಾವ್ ಪುಸಾಳ್ಕರ್ ಸಣ್ಣ ಔದ್ಯೋಗಿಕ ಘಟಕ ಪ್ರಾರಂಭಿಸಿದ್ದರು,ಅದು ಕೈಗಾರಿಕಾ ರಂಗದ ಬೆಳವಣಿಗೆಗೆ ಕಾರಣವಾಗಿದೆ ಎಂದರು.
*ಬೆಳಗಾವಿ: ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ*
https://pragati.taskdun.com/pm-modibelagavikannadasamavesha/
https://pragati.taskdun.com/plans-to-give-new-power-to-belgaum-implemented-prime-minister-narendra-modi/
*ಬೆಳಗಾವಿ: ಪ್ರಧಾನಿ ಮೋದಿ ರೋಡ್ ಶೋ ಆರಂಭ*
https://pragati.taskdun.com/belagavipm-narendra-modiroad-show/
*ಬೆಳಗಾವಿಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭ; ಪ್ರಧಾನಿ ಮೋದಿ*
https://pragati.taskdun.com/pm-narendra-modispeechbelagavi/
*ಪಿಎಂ-ಕಿಸಾನ್ ಅಡಿ 8 ಕೋಟಿ ರೈತರ ಖಾತೆಗೆ ಡಿಬಿಟಿ ಮೂಲಕ 16,800 ಕೋಟಿ ರೂ.ವರ್ಗಾವಣೆ*
https://pragati.taskdun.com/belagavipm-modipm-kisanbjp-samavesha/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ