Belagavi NewsBelgaum NewsKannada NewsKarnataka NewsLatest

*ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ; 7 ಆರೋಪಿಗಳು ಅರೆಸ್ಟ್*

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವ ಪರಮೇಶ್ವರ್


ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತೀವ್ರವಾಗಿ ಖಂಡಿಸಿದ್ದು, ಇದೊಂದು ಅಮಾನವೀಯ ಘಟನೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

Home add -Advt

ವಂಟಮೂರಿ ಗ್ರಾಮದ ಘಟನ ಅಸ್ಥಳಕ್ಕೆ ಭೇಟಿ ನೀಡಿದ ಗೃಹ ಸಚಿವರು, ಹಲ್ಲೆಗೊಳಗಾದ ಮಹಿಳೆಯ ಮನೆಗೆ ಭೇಟಿ ನೀಡಿದರು. ಮನೆಯಲ್ಲಿದ್ದ ಅಜ್ಜಿಯಿಂದ ಮಾಹಿತಿ ಪಡೆದರು. ಮಹಿಳೆಯ ಮನೆಯನ್ನು ಕೂಡ ಧ್ವಂಸಗೊಳಿಸಿದ್ದು, ಪೊಲೀಸ್ ಆಯುಕ್ತರಿಂದಲೂ ಮಾಹಿತಿ ಪಡೆದುಕೊಂಡರು.

ಈ ವೇಳೆ ಸುದ್ದಿಗರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಗ್ರಾಮದ 24 ವರ್ಷದ ಗುಂಡಪ್ಪ ಅಶೋಕ್ ಗಡ್ಕರಿ ಎಂಬ ರೈತ ಯುವಕ 18 ವರ್ಷದ ಪ್ರಿಯಾಂಕಾ ಎಂಬ ಯುವತಿಯನ್ನು ಪ್ರೀತಿಸಿ, ಆಕೆಯೊಂದಿಗೆ ಓಡಿ ಹೋಗಿದ್ದಾನೆ. ನಿನ್ನೆ ತಡರಾತ್ರಿ ಯುವತಿಯ ಮನೆಯವರು ಯುವಕನ ಮನೆಗೆ ಬಂದು ಗಲಾಟೆ ಮಾಡಿ ಮನೆಯನ್ನು ಧ್ವಂಸಗೊಳಿಸಿದ್ದಾರೆ. ಮಹಿಳೆಯನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇಂತಹ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ಮಹಿಳೆ ಹಾಗೂ ಮನೆಯವರು ಹೇಗೆ ಸಹಿಸಿಕೊಲ್ಳುತ್ತಾರೆ ಗೊತ್ತಿಲ್ಲ. ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.

ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.


Related Articles

Back to top button