Latest
9 ತಿಂಗಳ ಬಳಿಕ ಮತ್ತೆ ದಿಢೀರ್ ಏರಿಕೆಯಾದ ಕೊರೊನಾ ಸೋಂಕಿತರ ಸಂಖ್ಯೆ; ವ್ಯಾಪಕವಾಗಿ ಹರಡುತ್ತಿದೆ ರೂಪಾಂತರಿ ವೈರಸ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳವಾಗಿದೆ. ರೂಪಾಂತರಿ ವೈರಸ್ ನಡುವೆಯೇ ಕೊರೊನಾ ಸೋಂಕು ಕೂಡ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,775 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 9 ತಿಂಗಳಲ್ಲಿಯೇ ದಾಖಲಾದ ಅತಿ ಹೆಚ್ಚು ಪ್ರಕರಣಗಳಾಗಿವೆ.
ಕೋವಿಡ್ ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯಲ್ಲೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 406 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 481486 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 11,10,855 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8949 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 481486 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ 1431 ಜನರಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಕರ್ನಾಟಕದಲ್ಲಿ 66 ಜನರಲ್ಲಿ ಒಮಿಕ್ರಾನ್ ದೃಢಪಟ್ಟಿದೆ.