ಪ್ರಗತಿವಾಹಿನಿ ಸುದ್ದಿ: ಕಳ್ಳತನಕ್ಕೆ ಬಂದ ಕಳ್ಳರನ್ನು ಹಿಡಿದ ಗ್ರಾಮಸ್ಥರು ಗ್ರಾಮ ಪಂಚಾಯಿತಿಯಲ್ಲಿ ಕೂಡಿಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ.
ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದೆ ಗ್ರಾಮದಲ್ಲಿ ಕಳೆದ ಆರು ತಿಂಗಳಿಂದ ಹತ್ತಾರು ಕಳ್ಳತನ ಪ್ರಕರಣ ನಡೆದಿದೆ. ರೈತರ ಟ್ರ್ಯಾಕ್ಟರ್ ಸಾಮಗ್ರಿ, ಮೋಟರ್, ಪಂಪ್ ಸೆಟ್, ಮೇಕೆ, ಕುರಿಗಳ ಕಳ್ಳತನಕ್ಕೆ ಇಳಿದ್ದ ಗ್ಯಾಂಗ್ ನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು, ಪೊಲೀಸರಿಗೆ ಒಪ್ಪಿಸಿದ್ದಾರೆ.
ಮುಂಡರಗಿ ಪೊಲೀಸ್ ಠಾಣೆಗೆ ಕಳ್ಳತನವಾಗುತ್ತಿರುವ ಬಗ್ಗೆ ಸಾಕಷ್ಟು ಬಾರಿ ದೂರು ನೀಡಿದ್ರೂ ದೂರು ದಾಖಲಿಸಿಲ್ಲ. ಹಾಗಾಗಿ ಗ್ರಾಮಸ್ಥರೇ ರೆಡ್ ಹ್ಯಾಂಡ್ ಆಗಿ ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಕುರಿತು ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ