ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿಯ ಹಿರೇಮಠದ ಮಂದಿರದಲ್ಲಿ ಕಳ್ಳರು ತಮ್ಮ ಕೈಚಳಕ ತೊರಿದ್ದು, ಸುಮಾರು 30 ತೊಲೆಗೂ ಹೆಚ್ಚು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಈ ಘಟನೆ ಬೆಳಗ್ಗೆ ಭಾನುವಾರ ಬೆಳಕಿಗೆ ಬಂದಿದೆ. ಶನಿವಾರ ತಿಗಡಿ ಹಿರೇಮಠದ ಮಂದಿರದಲ್ಲಿ ಪೂಜಾ ಕೈಂಕರ್ಯ ಮುಗಿಸಿ ಕಿಲಿ ಹಾಕಿದ್ದ ಮಂದಿರವನ್ನು ಯಾರು ದುಷ್ಕರ್ಮಿಗಳು ಕನ್ನ ಹಾಕಿದ್ದಾರೆ. ಭಾನುವಾರ ಬೆಳಗ್ಗೆ ದೇವಸ್ಥಾನದ ಪೂಜೆ ಸಲ್ಲಿಸಲು ವೇಳೆ ಕಳ್ಳತನ ನಡೆದ ಪ್ರಕರಣ ಬೆಳಕಿಗೆ ಬಂದಿದೆ. ದೇವಸ್ಥಾನದಲ್ಲಿನ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸ್ ಶ್ವಾನದಳ ಹಾಗೂ ಬೈಲಹೊಂಗಲ ಸಿಪಿಐ ಪಿ.ವಿ.ಸಾಲಿಮಠ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ