Kannada NewsKarnataka NewsLatest

ಹಳೆ ಪಿಂಚಣಿ ಯೋಜನೆ ಜಾರಿ: ಸಿಎಂ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006 ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ.

ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ..

Home add -Advt

ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ ಎಂದಿದ್ದಾರೆ.

Related Articles

Back to top button