CrimeKannada NewsKarnataka NewsLatest

*ಮಹಾಶಿವರಾತ್ರಿ ಜಾಗರಣೆಗೆ ಹೋಗಿದ್ದ ಕುಟುಂಬಕ್ಕೆ ಕಳ್ಳರ ಶಾಕ್*

ಪ್ರಗತಿವಾಹಿನಿ ಸುದ್ದಿ: ಮಹಾಶಿವರಾತ್ರಿ ಜಾಗರಣೆಯನ್ನೇ ಬಂಡವಾಳ ಮಾಡಿಕೊಂಡ ಖದೀಮರು ಶಿವರಾತ್ರಿ ಜಾಗರಣೆಗೆ ಹೋಗಿದ್ದವರ ಮನೆ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

ವಿಜಯಪುರದ ಶಾರದಾ ನಗರದಲ್ಲಿನ ಸೋಮಶೇಖರ ಗಣಿ ಎಂಬವರ ಮನೆ ಕಳ್ಳತನ ಮಾಡಲಾಗಿದೆ. ಮನೆಯಲ್ಲಿದ್ದ 40 ಸಾವಿರ ನಗದು, 154 ಗ್ರಾಂ ಚಿನ್ನಾಭರಣ, 270 ಗ್ರಾಂ ಬೆಳ್ಳಿ ಆಭರಣ ಕದ್ದು ಖದೀಮರು ಪರಾರಿಯಾಗಿದ್ದಾರೆ. 

Related Articles

ಮನೆಗೆ ಬೀಗ ಹಾಕಿ ಶಿವಗಿರಿಗೆ ಕುಟುಂಬಸ್ಥರು ತೆರಳಿದ್ದರು ಎನ್ನಾಲಾಗಿದೆ. ಸದ್ಯ ಸ್ಥಳಕ್ಕೆ ಗೋಲಗುಂಬಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಲಗುಂಬಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

Related Articles

Back to top button