Kannada NewsKarnataka NewsNationalPolitics

*ಉದ್ಯಮಿ ಮನೆಯಲ್ಲಿ ಚಿನ್ನಾಭರಣ ಕದ್ದು ಪರಾರಿಯಾದ ಕಳ್ಳರು*

ಪ್ರಗತಿವಾಹಿನಿ ಸುದ್ದಿ: ದಸರಾ ಹಬ್ಬದಂದೇ ಉದ್ಯಮಿಯೊಬ್ಬರ ಮನೆಯಿಂದ 355 ಗ್ರಾಂ ಚಿನ್ನ 5 ಕೆಜಿ ಬೆಳ್ಳಿ ಹಾಗೂ 70 ಸಾವಿರ ನಗದು ಕಳ್ಳತನವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

ನೆಲಮಂಗಲ ಪಟ್ಟಣದ ಉದ್ಯಮಿ ಲಾಲಾರಂ ಅವರು ಪೂಜೆ ಹಾಗೂ ಭಜನೆ ಕಾರ್ಯಕ್ರಮಕ್ಕೆ ತೆರಳಿದ್ದರು. ಇದೇ ಸಮಯ ನೋಡಿಕೊಂಡು, ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ. ಮನೆ ಬಾಗಿಲು ಮುರಿದು 15 ಲಕ್ಷ ಮೌಲ್ಯದ 355 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ ಹಾಗೂ 70 ಸಾವಿರ ನಗದನ್ನು ದೋಚಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಪೋಲಿಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದಸರಾ ಹಬ್ಬದ ಅಂಗವಾಗಿ ಪೂಜೆ ಭಜನೆ ಕಾರ್ಯಕ್ರಮಕ್ಕೆ ಉದ್ಯಮಿ ಲಾಲಾರಾಂ ತೆರಳಿದ್ದಾಗ ದುಷ್ಕರ್ಮಿಗಳು ಈ ಕೃತ್ಯವನ್ನು ಎಸೆಗಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಕುರಿತಂತೆ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button