Belagavi NewsBelgaum NewsKannada NewsKarnataka NewsLatest

*ಬೆಳಗಾವಿ: ಅಮೃತ ಕಳಸ ಯಾತ್ರೆಯ ವಿಶೇಷ ರೈಲಿಗೆ ಗ್ರೀನ್ ಸಿಗ್ನಲ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯಸಭಾ ಸಂಸದ, ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು “ನನ್ನ ಮಣ್ಣು ನನ್ನ ದೇಶ” ಅಭಿಯಾನದ ಅಂಗವಾಗಿ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿರುವ “ಅಮೃತ ಕಳಸ ಯಾತ್ರೆ”ಯನ್ನು ಬೆಳಗಾವಿಯ ರೈಲ್ವೆ ನಿಲ್ದಾಣದಲ್ಲಿ ಸ್ವಾಗತಿಸಿ, “ಅಮೃತ ಕಳಸ ಯಾತ್ರೆ”ಯ ವಿಶೇಷ ರೈಲಿಗೆ ಹಸಿರು ನಿಶಾನೆ ತೋರಿದರು.

ಈ ವೇಳೆ ನನ್ನ ಮಣ್ಣು ನನ್ನ ದೇಶ ಅಭಿಯಾನದ ಅಂಗವಾಗಿ ಬೆಳಗಾವಿ ಜಿಲ್ಲೆಯಿಂದ ಸಂಗ್ರಹಿಸಿದ ಮಣ್ಣನ್ನು ಹಾಗೂ ಕಾರ್ಯಕರ್ತರನ್ನು ಬೀಳ್ಕೊಡಲಾಯಿತು.

Home add -Advt

ಈ ಸಂದರ್ಭದಲ್ಲಿ ಬೆಳಗಾವಿ ದಕ್ಷಿಣ ಶಾಸಕರಾದ ಅಭಯ ಪಾಟೀಲ, ಮೇಯರ್ ಶೋಭಾ ಸೋಮನಾಚೆ, ಚಿಕ್ಕೋಡಿ ಜಿಲ್ಲಾಧ್ಯಕ್ಷ ರಾಜೇಶ್ ನೇರ್ಲಿ, ಬೆಳಗಾವಿ ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.


Related Articles

Back to top button