
ಪ್ರಗತಿವಾಹಿನಿ ಸುದ್ದಿ: ಬಳ್ಳಾರಿಯ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲಾಗಿದೆ.
ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಹಾರಿಸಿದ್ದ 12 ಎಂಎಂ ಬುಲೆಟ್ ರಾಜಶೇಖರ್‌ಗೆ ತಗುಲಿರುವುದು ದೃಢಪಟ್ಟಿದೆ.
ಸತೀಶ್ ರೆಡ್ಡಿ ಖಾಸಗಿ ಗನ್‌ಮ್ಯಾನ್ ಕೂಡ ಬಳಸಿರೋದು ಇದೇ ಗನ್ ಆಗಿದೆ. ಪ್ರಕರಣ ಸಂಬಂಧ ಇಬ್ಬರು ಗನ್ ಮ್ಯಾನ್ ಗಳಾದ ಗುರುಚರಣ ಸಿಂಗ್, ಬಲ್ಜಿತ್ ಸಿಂಗ್ ಗನ್‌ಗಳನ್ನು ಬ್ರೂಸ್ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿಸಿದ್ದಾರೆ.
ಗಲಾಟೆ ಪ್ರಕರಣ ಸಂಬಂಧ ಎರಡೂ ಗುಂಪುಗಳ ಮೇಲೂ ಪೊಲೀಸರು FIR ದಾಖಲಿಸಿಕೊಂಡಿದ್ದು 50ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ್ದಾರೆ.



