Latest

ಈ ಬಾರಿ ಮುಂಗಾರು ಪ್ರವೇಶ ವಿಳಂಬ ಸಾಧ್ಯತೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಈ ಬಾರಿ ಮುಂಗಾರು ಪ್ರವೇಶ ವಿಳಂಬವಾಗಿ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೇರಳ ಕರಾವಳಿ ತೀರಕ್ಕೆ ಜೂನ್‌ 1ರ ವೇಳೆಗೆ ಮುಂಗಾರು ಪ್ರವೇಶವಾಗುತ್ತದೆ. ಆದರೆ ಈ ಬಾರಿ ನಾಲ್ಕು ದಿನ ತಡವಾಗಿ ಮುಂಗಾರು ಮಾರುತ ಕೇರಳ ಕರಾವಳಿ ಪ್ರವೇಶಿಸಲಿವೆ. ಇದರಿಂದ ಮುಂಗಾರು ಮಳೆಯ ಆರಂಭ ಒಂದು ವಾರ ವಿಳಂಬವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೇರಳ ಪ್ರವೇಶಿಸಿದ ಒಂದು ವಾರದ ಬಳಿಕ ರಾಜ್ಯದಲ್ಲಿ ಸಂಪೂರ್ಣವಾಗಿ ಮುಂಗಾರು ಆವರಿಸುವ ಸಾಧ್ಯತೆಯಿದ್ದು ಜೂನ್‌ 10ರ ಬಳಿಕ ಹಂತಹಂತವಾಗಿ ಕರ್ನಾಟಕದ ಬೇರೆಬೇರೆ ಜಿಲ್ಲೆಗಳನ್ನು ವ್ಯಾಪಿಸಲಿದೆ ಎಂದು ಹೇಳಲಾಗಿದೆ.

ಇದೇ ವೇಳೆ ರಾಜ್ಯದ ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು, ಕರಾವಳಿಯಲ್ಲಿ ಒಣಹವೆ ಮುಂದುವರೆಯಲಿದೆ.

ರಾಜ್ಯದ ಹಲವೆಡೆ ತಾಪಮಾನದಲ್ಲಿ ಏರಿಕೆಯಾಗಿದ್ದು, ಕಲಬುರಗಿಯಲ್ಲಿ ಅತ್ಯಂತ ಗರಿಷ್ಠ (40.2 ಡಿಗ್ರಿ ಸೆಲ್ಸಿಯಸ್​) ಉಷ್ಣಾಂಶ ದಾಖಲಾಗಿದ್ದು 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ (23.0 ಡಿಗ್ರಿ ಸೆಲ್ಸಿಯಸ್)​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

https://pragati.taskdun.com/siddaramaiah-is-the-reason-why-we-quit-congress-dr-k-sudhakara/
https://pragati.taskdun.com/powerful-leaders-of-belgaum-who-will-get-a-place-in-the-cabinet/
https://pragati.taskdun.com/duplicate-document-admission-of-51-students-canceled-by-vtu/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button