Kannada NewsKarnataka NewsLatestPolitics
*ಬಿಸಿಯೂಟ ಕಾರ್ಯಕರ್ತೆಯರಿಗೆ ಬಳೆ ನಿಷೇಧ; ಸ್ಪಷ್ಟನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವುದನ್ನು ರಾಜ್ಯ ಸರ್ಕಾರ ನಿಷೇಧ ಮಾಡಿದೆ ಎಂಬ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಬಳೆ ನಿಷೇಧಿಸಿದ್ದು ಕೇಂದ್ರ ಸರಕಾರ ಎಂದಿದ್ದಾರೆ.
ಬಿಸಿಯೂಟ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ ಎನ್ನುವುದು ಸುಳ್ಳು ಸುದ್ದಿ. ಇದನ್ನು ವ್ಯಾಪಕವಾಗಿ ಹರಡಿಸಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಾಸ್ತವವಾಗಿ ಕೇಂದ್ರ ಸರ್ಕಾರ ಪೋಷಣ್ ಯೋಜನೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ಹೊರಡಿಸಿ, ಬಿಸಿಯೂಟದ ಕಾರ್ಯಕರ್ತೆಯರು ಬಳೆ ತೊಡುವುದನ್ನು ನಿಷೇಧಿಸಿದೆ ಎಂದು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.




