ಪ್ರಗತಿವಾಹಿನಿ ಸುದ್ದಿ: ಅಹಮದಾಬಾದ್ -ವಡೋದರಾ ಎಕ್ಸ್‌ಪ್ರೆಸ್‌ವೇಯಲ್ಲಿ ತಡ ರಾತ್ರಿ ಟ್ರಕ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಲ್ಲಿ ಮೂವರು ಸಾವನ್ನಪ್ಪಿದ್ದು, ಅಪ್ರಾಪ್ತ ಬಾಲಕಿ ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಪೊಲೀಸ್ ವರದಿಯ ಪ್ರಕಾರ, ಮದುವೆ ಸಮಾರಂಭ ಮುಗಿಸಿ ಸೂರತ್ ಗೆ ವಾಪಸ್ ಆಗುವ ವೇಳೆ ನಾಡಿಯಾಡ್ ಬಳಿ ಕಾರಿನ ಟೈರ್ ಏಕಾಏಕಿ ಸ್ಫೋಟಗೊಂಡಿದ್ದು, ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಕ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಗಿದ್ದು, ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಪುರುಷರು ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ ಇಬ್ಬರನ್ನೂ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ 14 ವರ್ಷದ ಅಪ್ರಾಪ್ತ ಬಾಲಕಿ ಕೂಡ ಇದ್ದಾರೆ ಎನ್ನಲಾಗಿದೆ.
ಸದ್ಯ ಘಟನೆಗೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ