Kannada NewsKarnataka NewsLatest

ಪ್ರಭಾವಿಗಳಿಬ್ಬರು ಸಂತೋಷ್ ಪಾಟೀಲ್ ಗೆ ಬೆದರಿಕೆ ಹಾಕಿದ್ದರು – ಲಕ್ಷ್ಮಿ ಹೆಬ್ಬಾಳಕರ್ ಸ್ಫೋಟಕ ಹೇಳಿಕೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಮತ್ತು ಪ್ರಭಾವಿ ಶಾಸಕರೊಬ್ಬರು ಸೇರಿ ಗುತ್ತಿಗೆದಾರ ಸಂತೋಷ ಪಾಟೀಲ ಅವರಿಗೆ ಬೆದರಿಕೆ ಹಾಕಿದ್ದರು. ಹಾಗಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಆರೋಪಿಸಿದ್ದಾರೆ.

ಸಂತೋಷ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯ ವೇಳೆ ಅವರು ಮಾತನಾಡುತ್ತಿದ್ದರು.

ಕಾಂಗ್ರೆಸ್ ಗೆ ಸಾವಿನ ಮನೆಯಲ್ಲಿ ರಾಜಕಾರಣ ಬೇಕಿಲ್ಲ. ಆದರೆ ಆ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ.  ಈಶ್ವರಪ್ಪನವರನ್ನು ತಕ್ಷಣ ವಜಾ ಮಾಡಿ, ಬಂಧಿಸಬೇಕು. ಇಡೀ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಅವರು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಾಂಗ್ರೆಸ್ ಭವನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಲಾಯಿತು. ಅಶೋಕ ಪಟ್ಟಣ, ವಿನಯ ನಾವಲಗಟ್ಟಿ, ರಾಜು ಸೇಠ್, ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳಕರ್, ಲಕ್ಷ್ಮಣರಾವ್ ಚಿಂಗಳೆ ಸೇರಿದಂತೆ ನೂರಾರು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಹಿಂಡಲಗಾ ಗ್ರಾಪಂ ಅಧ್ಯಕ್ಷನ ಸ್ಪೋಟಕ ಹೇಳಿಕೆ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button