Latest

ಡಿ.ಕೆ.ಶಿವಕುಮಾರ್ ವಶಕ್ಕೆ ಪಡೆದ ಮುಂಬೈ ಪೊಲೀಸರು

ಪ್ರಗತಿವಾಹಿನಿ ಸುದ್ದಿ, ಮುಂಬೈ:

ಅತೃಪ್ತ ಶಾಸಕರನ್ನು ಕರೆದುಕೊಂಡೇ ಬರುವುದಾಗಿ ಪಟ್ಟು ಹಿಡಿದು ಮುಂಬೈ ಹೊಟೆಲ್ ಮುಂದೆ ಕುಳಿತಿದ್ದ ಕರ್ನಾಟಕದ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಮುಂಬೈ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Home add -Advt

ಪೊಲೀಸ್ ವಾಹನದಲ್ಲಿ ಅವರನ್ನು ಕರೆದುಕೊಂಡು ಹೋಗಲಾಗಿದೆ. ಆದರೆ ಅವರೊಂದಿಗಿದ್ದ ಜಿ.ಟಿ.ದೇವೇಗೌಡ ಮತ್ತು ಶಾಸಕ ಶಿವಲಿಂಗೇಗೌಡರನ್ನು ಅಲ್ಲಿಯೇ ಬಿಡಲಾಗಿದೆ.

ಡಿ.ಕೆ.ಶಿವಕುಮಾರ ಅವರನ್ನು ಎಲ್ಲಿಗೆ ಕರೆದೊಯ್ಯಲಾಗಿದೆ ಎನ್ನುವುದು ಇನ್ನಷ್ಟೆ ಗೊತ್ತಾಗಬೇಕಿದೆ.

ಈ ಮಧ್ಯೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರತಿಭಟನೆ ಮುಂದುವರಿದಿದೆ.

Related Articles

Back to top button