Belagavi NewsBelgaum NewsKannada NewsKarnataka NewsNational

*ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರ ಸಾವು*

ಪ್ರಗತಿವಾಹಿನಿ ಸುದ್ದಿ:  ಕೃಷ್ಣಾ ನದಿಗೆ ಈಜಲು ಹೋಗಿದ್ದ ಮೂವರು ಬಾಲಕರು ನದಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಸೀತಿಮನಿ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಮಲ್ಲಪ್ಪ ಬಗಲಿ (16), ಪರನಗೌಡ ಬೀಳಗಿ (17), ಸೋಮಶೇಖರ್ ದೇವರಮನಿ (15) ಎಂದು ಗುರುತಿಸಲಾಗಿದ್ದು, ಗ್ರಾಮದಲ್ಲಿ ಸೂತಕದ ವಾತಾವರಣ ಆವರಿಸಿದೆ.

ಸದ್ಯ ಸೋಮಶೇಖ‌ರ್ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಶವಕ್ಕಾಗಿ ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

Home add -Advt

Related Articles

Back to top button