
ಪ್ರಗತಿವಾಹಿನಿ ಸುದ್ದಿ; ಕೊಡಗು: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ನಾಲೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ.
ಹಾರಂಗಿ ಎಡದಂಡೆ ಕಾಲುವೆಯಲ್ಲಿ ತೇಲಿಬರುತ್ತಿದ್ದ ಮೂವರು ಮಕ್ಕಳ ಮೃತದೇಹವನ್ನು ಸ್ಥಳೀಯರು ಮೇಲಕ್ಕೆತ್ತಿದ್ದಾರೆ. ವಿನಯ್, ವಿಜಯ್, ದೀಕ್ಷಾ ಮೃತ ಮಕ್ಕಳು. ಮಹಿಳೆಯ ಮೃತದೇಹ ಇನ್ನೂ ಪತ್ತೆಯಾಗಿಲ್ಲ.
ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.