ಪ್ರಗತಿವಾಹಿನಿ ಸುದ್ದಿ : ಫೆಬ್ರವರಿ 28 ರಿಂದ ಮೂರು ದಿನ ಹಂಪಿ ಉತ್ಸವ ಆಯೋಜನೆಗೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ. ಉತ್ಸವಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡಿದ್ದಾರೆ.
ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ.
ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಕಾರ್ಯಕ್ರಮ ಗಳು ಇರಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ.
ಹಂಪಿ ಉತ್ಸವ ಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. ಈ ಬಾರಿ ಕಳೆದ ಬಾರಿಗಿಂತ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ