
ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ನಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆದಿತ್ತು. ಈ ವೇಳೆ ಗುಡ್ಡ ಕುಸಿದು ದುರ್ಘಟನೆ ಸಂಭವಿಸಿದೆ. ಕಾಮಗಾರಿಯ ನಿರ್ವಹಣೆ ಮಾಡುತ್ತಿದ್ದ ಓರ್ವ ಹೊರ ರಾಜ್ಯದ ಕಾರ್ಮಿಕ ಸೇರಿ ಮೂವರು ಸಾವನ್ನಪ್ಪಿದ್ದಾರೆ.
ಸುಮಂತ ಮತ್ತು ಪರಮೇಶ್ ಸೇರಿ ನಾಲ್ವರಿಗೆ ಗಾಯಗಳಾಗಿದ್ದು, ನಗರ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ರಾಘವೇಂದ್ರ(37), ರಾಜು(30) ಮತ್ತು ಶಬ್ಬೀರ್(40) ಮೃತರು. ಘಟನಾ ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
ಸದ್ಯ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಚರಣೆ ನಡೆದಿದ್ದು, ರಾತ್ರಿ ಹಿನ್ನೆಲೆ ಅಡ್ಡಿಯುಂಟಾಗಿದೆ. ಘಟನಾ ಸ್ಥಳಕ್ಕೆ ಹೊಸನಗರ ತಹಶೀಲ್ದಾರ್ ಭರತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಕುಂದಾಪುರ-ಶಿವಮೊಗ್ಗ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತ ಉಂಟಾಗಿದೆ.
ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವಂತಹ ಘಟನೆ ಶಿವಮೊಗ್ಗದ ತುಂಗಾನಗರ ಬಳಿಯ ಕಾಮತ್ ಲೇಔಟ್ನಲ್ಲಿ ನಡೆದಿದೆ. ಶಿವಮೊಗ್ಗದ ಮೇಲಿನ ತುಂಗಾನಗರ ನಿವಾಸಿಯಾಗಿರುವ ಮಂಜುನಾಥ್ ಮೃತ ಯುವಕ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




