
ಪ್ರಗತಿವಾಹಿನಿ ಸುದ್ದಿ : ಕಸದ ರಾಶಿ ಮಧ್ಯೆ ಆಟವಾಡುತ್ತಿದ್ದ ಐವರು ಹೆಣ್ಣು ಮಕ್ಕಳ ಪೈಕಿ ಮೂವರು ಮೃತಪಟ್ಟಿದ್ದಾರೆ. ಈ ಘಟನೆ ಗುಜರಾತ್ ನ ಸೂರತ್ ನಲ್ಲಿ ನಡೆದಿದೆ.
ಕಸದ ರಾಶಿಯನ್ನು ಸುಟ್ಟಾಗ ಸೃಷ್ಟಿಯಾದ ವಿಷ ಗಾಳಿ ಸೇವಿಸಿದ್ದಕ್ಕೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಮೃತ, ದುರ್ಗಾ, ಅನಿತಾ ಮೃತ ದುರ್ದೈವಿಗಳು ಸೂರತ್ ನ ಹೊರವಲಯದಲ್ಲಿ ಘಟನೆ ನಡೆದಿದೆ. ಕಸದ ರಾಶಿಗೆ ಬೆಂಕಿ ಹಾಕಲಾಗಿದ್ದು, ಸುಡುತ್ತಿದ್ದ ವೇಳೆ ಸಂಭವಿಸಿದ ಹೊಗೆಯಿಂದ ಮಕ್ಕಳ ಆರೋಗ್ಯದಲ್ಲಿ ಏರುಪೇರಾಗಿತ್ತು. ಇದ್ರಿಂದ ವಾಂತಿ ಮತ್ತು ತಲೆಸುತ್ತು ಸಮಸ್ಯೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸಿದ್ರು ಯಾವುದೇ ಪ್ರಯೋಜನವಾಗಿಲ್ಲ. ಮೂವರು ಹೆಣ್ಣು ಮಕ್ಕಳು ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ ದುರಂತ ಸಂಭವಿಸಿದೆ.
ಸ್ಥಳೀಯ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಬದುಕುಳಿದಿರೋ ಇನ್ನಿಬ್ಬರು ಹೆಣ್ಣುಮಕ್ಕಳನ್ನ ಸ್ಥಳಕ್ಕೆ ಕರೆದೊಯ್ದು ಮಾಹಿತಿ ಸಂಗ್ರಹಿಸಲಾಗಿದೆ.



