
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಟ್ರಕ್ ಗೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿ ಮೂವರು ಪ್ರಾಣಬಿಟ್ಟಿರುವ ಘಟನೆ ಚಿತ್ರದುರ್ಗದಲ್ಲಿ ಸಂಭವಿಸಿದೆ.
ಅಪಘಾತದ ರಭಸಕ್ಕೆ ಎರಡೂ ಟ್ರಕ್ ಗಳು ಸಂಪೂರ್ಣ ನಜ್ಜುಗುಜ್ಜಾಗಿದೆ. ಇಂದು ಬೆಳಿಗಿನ ಜಾವ ಸಿಬಾರ ಗ್ರಾಮದ ಬಳಿ ದುರ್ಘಟನೆ ನಡೆದಿದ್ದು, ಸಾವನಪ್ಪಿದ್ದ ಮೂವರು ಸ್ಥಳದಲ್ಲಿ ರಕ್ತಸಿಕ್ತರಾಗಿ ಬಿದ್ದಿದ್ದಾರೆ. ಮೃತರ ಗುರುತು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನ ನಡೆಸಿದ್ದಾರೆ. ನಿದ್ರೆ ಮಂಪರಿನಲ್ಲಿ ಟ್ರಕ್ ಡ್ರೈವರ್ ಗಾಡಿ ಚಲಾಯಿಸಿದ್ದೆ ಅಪಘಾತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಲಾರಿ ಚಾಲಕ ಹಾಗೂ ಕಲ್ಲಂಗಡಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ಸ್ಥಳೀಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ