Karnataka News

*ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಡಿವೈಡರ್ ಗೆ ಗುದ್ದಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ ಶಿವಾಜಿನಗರದ ನಿವಾಸಿಗಳಾದ ಲಿಯಾಕತ್ (50), ಅಸ್ಮಾ (38), ನೂರ್ (40) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಮೈಸೂರಿಗೆ ಸಂಬಂಧಿಕರ ಕಾರ್ಯಕ್ರಮವೊಂದಕ್ಕೆ ನಿನ್ನೆ ರಾತ್ರಿ ಹೊರಟಿದ್ದರು.

Home add -Advt

ರಾತ್ರಿ 9.30ರ ಹೊತ್ತಿಗೆ ಕಾರು ಸಂಗಬಸವನದೊಡ್ಡಿ ಸಾಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಗುದ್ದಿದ ಕಾರು ಎದುರು ಬದಿಯಿಂದ ಬರುತ್ತಿದ್ದ ಕೆಎಸ್ ಆರ್‌ಟಿಸಿ ಬಸ್ಸಿಗೆ ಗುದ್ದಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.

ಭೀಕರ ಅಪಘಾತದ ಹಿನ್ನಲೆ ಹೆದ್ದಾರಿಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ಕೂಡಲೇ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು ಸ್ಥಳೀಯರ ಸಹಾಯದಿಂದ ಮೃತದೇಹವನ್ನು ಕಾರಿನಿಂದ ಹೊರತೆಗೆದು ರಾಮನಗರ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು.

Related Articles

Back to top button