
ಪ್ರಗತಿವಾಹಿನಿ ಸುದ್ದಿ: ಇಂದು ಬೆಳ್ಳಂಬೆಳಗ್ಗೆ ನಿಂತಿದ್ದ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದರ್ಮರಣ ಹೊಂದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಳ್ಳಿ ಕ್ರಾಸ್ ನಲ್ಲಿ ಸಂಭವಿಸಿದೆ.
ಮೃತರು ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗುಳೆದಗುಡ್ಡ ಗ್ರಾಮದ ನಿಲವ್ವ ಹರದೊಳ್ಳಿ (40), ಜಾಲಿಹಾಳ ಗ್ರಾಮದ ಗಿರಿಜವ್ವಾ ಬೂದನ್ನವರ (30) ಹಾಗೂ ಸುಮಾರು 45 ವರ್ಷದ ವ್ಯಕ್ತಿಯ ಗುರುತು ಸಿಕ್ಕಿಲ್ಲ.
ಘಟನೆಯಲ್ಲಿ ಇನ್ನೂ 7 ಮಂದಿಗೆ ಗಾಯಗಳಾಗಿವೆ. ಅವರೆಲ್ಲರು ಬಾಗಲಕೋಟೆ ಮೂಲದವರೆಂದು ತಿಳಿದು ಬಂದಿದೆ. ಗಾಯಾಳುಗಳಲ್ಲಿ ಮಕ್ಕಳು ಕೂಡಾ ಸೇರಿದ್ದು ಅವರೆಲ್ಲರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಜಾಗರೂಕ ಬಸ್ ಚಾಲನೆ ಮಾಡಿದ ಚಾಲಕ ಆಲಮಟ್ಟಿ ಗ್ರಾಮದ ಯಮನಪ್ಪ ಮಾಗಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.