ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಸಚಿವ ಸಂಪುಟದ ತೀರ್ಮಾನದಂತೆ, ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕವಾಗಿ ಹಾಗು ಕಾನೂನಾತ್ಮಕ ಚೌಕಟ್ಟಿನಲ್ಲಿ ಪರೀಶೀಲಿಸಲು ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿ ರವರ ಅಧ್ಯಕ್ಷತೆಯಲ್ಲಿ ಸರಕಾರ ಸಮಿತಿಯೊಂದನ್ನು ನೇಮಕ ಮಾಡಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ಕುರಿತು ಟ್ವೀಟ್ ಮಾಡಿದ್ದಾರೆ. ಪಂಚಮಸಾಲಿ, ವಾಲ್ಮೀಕಿ, ಕುರುಬ ಜನಾಂಗದವರು ಸೇರಿದಂತೆ ವಿವಿಧ ಜಾತಿಯವರು ಮೀಸಲಾತಿಗೆ ಒತತಾಯಿಸುತ್ತಿದ್ದು, ಅವುಗಳ ಕುರಿತು ಪರಿಶೀಲಿಸಲು ಈ ತ್ರಿ ಸದಸ್ಯ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಮತ್ತು ಮಹಾರಾಣಿ ಕಾಲೇಜಿನ ಪ್ರಾದ್ಯಾಪಕ ಡಾ.ಬಿ.ವಿ.ವಸಂತಕುಮಾರ ಸಮಿತಿಯ ಸದಸ್ಯರಾಗಿದ್ದಾರೆ.
https://twitter.com/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ