
ಪ್ರಗತಿವಾಹಿನಿ ಸುದ್ದಿ; ತುಮಕೂರು: ದಂಪತಿ ಹಾಗೂ ಮಗಳು ಸೇರಿ ಒಂದೇ ಕುಟುಂಬದ ಮೂವರು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಪಂಡಿತನಹಳ್ಳಿಯಲ್ಲಿ ನಡೆದಿದೆ.
ಸಿದ್ದಗಂಗಯ್ಯ (62) ಸುನಂದಮ್ಮ ಹಾಗೂ ಮಗಳು ಗೀತಾ ಆತ್ಮಹತ್ಯೆಗೆ ಶರಣಾದವರು. ಸಾಲಬಾಧೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸಿದ್ದಗಂಗಯ್ಯ ಮೂಲತ: ತುಮಕೂರಿನ ಮರಳೂರು ನಿವಾಸಿಯಾಗಿದ್ದರು. ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಸಿದ್ದಗಂಗಯ್ಯ ಎರಡು ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ವಿಪರೀತ ಸಾಲ ಮಾಡಿಕೊಂಡಿದ್ದರು. ಇದರಿಂದ ಸಿದ್ದಗಂಗಯ್ಯ ಬೆಂಗಳೂರಿನ ಮಲ್ಲೇಶ್ವರಂ ಬಳಿ ಕೆ.ಸಿ.ಜನರಲ್ ಆಸ್ಪತ್ರೆ ಸಮೀಪ ಟೀ ಶಾಪ್ ನಡೆಸುತ್ತಿದ್ದರು.
ಇಂದು ಮುಂಜಾನೆ ಸಿದ್ದಗಂಗಯ್ಯ ದಂಪತಿ ಹಾಗೂ ಮಗಳು ಮೂವರೂ ಆಟೋದಲ್ಲಿ ಪಂಡಿತನಹಳ್ಳಿ ಬಳಿ ಬಂದಿದೆ ಎಂದು ತಿಳಿದುಬಂದಿದೆ. ಈಗ ನೋಡಿದರೆ ಮಗಳೊಂದಿಗೆ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲಿಗೆ ಸಿಲುಕಿ ಮೂವರ ಮೃತದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಸ್ಥಳಕ್ಕೆ ಯಶವಂತಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ