ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಆತನ ಸಹಪಾಠಿಗಳೇ ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನ ವಾಲ್ಮೀಕಿ ಮೈದಾನದಲ್ಲಿ ನಡೆದಿದೆ.
ಗಾಯಾಳು ವಿದ್ಯಾರ್ಥಿಯನ್ನು ಪ್ರದೀಪ್ ಬಂಡಿವಡ್ಡರ್ ಎಂದು ಗುರುತಿಸಲಾಗಿದೆ. ಈತನಿಗೆ ಅಪ್ರಾಪ್ತ ಬಾಲಕರು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಪ್ರದೀಪ್‌ಗೆ ಆತನ ಗೆಳೆಯರು ಶಾಲೆಯಿಂದ ಬ್ಯಾಗ್ ತರುವಂತೆ ಹೇಳಿದ್ದಾರೆ. ಆದರೆ ಗೆಳೆಯರ ಮಾತಿಗೆ ಸೊಪ್ಪು ಹಾಕದ ಪ್ರದೀಪ್ ಬ್ಯಾಗ್ ತರದೇ ಬಂದಿದ್ದ. ಈ ಕಾರಣಕ್ಕಾಗಿ ಅಪ್ರಾಪ್ತರು ಈ ಕೃತ್ಯ ಎಸಗಿದ್ದಾರೆ. ಇತ್ತ ಗಾಯಗೊಂಡ ಬಾಲಕನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕಾಕ್ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ