
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಡ್ಡ ಕುಸಿದು ಇಬ್ಬರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೆ ರಾಷ್ಟ್ರ ರಾಜಧನಿ ದೆಹಲಿಯ ದರಿಯಾಗಂಜ್‌ನ ಸದ್ಭಾವನಾ ಪಾರ್ಕ್ ಬಳಿ ಕಟ್ಟಡವೊಂದು ಕುಸಿದು ಮೂವರು ಮೃತಪಟ್ಟಿದ್ದಾರೆ.
ಘಟನೆ ಕುರಿತು ಮಧ್ಯಾಹ್ನ 12.14ಕ್ಕೆ ಮಾಹಿತಿ ದೊರಕಿದ್ದು, ಮೂರು ಮಹಡಿಗಳ ಕಟ್ಟಡ ಕುಸಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ದಳದ ವಾಹನಗಳನ್ನು ರವಾನಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಗಳು ತಿಳಿಸಿದ್ದಾರೆ.
ಅವಶೇಷಗಳಿಂದ ಮೂವರನ್ನು ರಕ್ಷಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಕಟ್ಟಡ ಕುಸಿತದ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.