
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ತಡರಾತ್ರಿ ಗಣಪತಿ ವಿಸರ್ಜನೆ ಮಾಡುವ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ಪ್ರವಹಿಸಿ ಮೂವರು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಣಪತಿ ವಿಸರ್ಜಿಸಿ ಬರುವಾಗ ಈ ದುರಂತ ಸಂಭವಿಸಿದ್ದು, ಟ್ರ್ಯಾಕ್ಟರ್ ನಲ್ಲಿ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿದ್ದಾರೆ. ಆರು ಜನರು ಗಾಯಗೊಂಡಿದ್ದಾರೆ.
ರಾಜು (47), ಪಾರ್ವತಿ(35) ಹಾಗೂ ರಚನಾ(28) ಮೃತರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ವಿಮಾನದಲ್ಲಿ ಬೆಳಗಾವಿಗೆ 12 ಗಂಟೆಗೆ ಉಮೇಶ ಕತ್ತಿ ಪಾರ್ಥಿವ ಶರೀರ ; ವಿಮಾನ ನಿಲ್ದಾಣದಿಂದ ಮೆರವಣಿಗೆಯಲ್ಲಿ ಹುಟ್ಟೂರಿಗೆ; BJP ಜನೋತ್ಸವ ಮುಂದೂಡುವ ಸಾಧ್ಯತೆ
https://pragati.taskdun.com/latest/to-belgaum-by-special-flight-umesh-katthis-mortal-remains-will-be-taken-in-a-procession-from-sambra-airport/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ