ಪ್ರಗತಿವಾಹಿನಿ ಸುದ್ದಿ: ಪ್ರವಾಸಿಗರನ್ನು ಬೆದರಿಸಿ ಅವರಿಂದ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ಮೂವರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್‌ಎಸ್ ಪೊಲೀಸ್ ಠಾಣೆಯ ಮುಖ್ಯಪೇದೆ ಪುರುಷೋತ್ತಮ್ ಹಾಗೂ ಕಾನ್ಸ್ ಟೇಬಲ್ ಅನಿಲ್ ಕುಮಾರ್ ಮತ್ತು ಪ್ರಭುಸ್ವಾಮಿ ಅಮಾನತುಗೊಂಡವರು.
ಕೆಆರ್‌ಎಸ್ ವೀಕ್ಷಣೆಗೆಂದು ಬರುವ ಪ್ರವಾಸಿಗರ ವಾಹನಗಳನ್ನೇ ಗುರಿಯಾಗಿರಿಸಿಕೊಂಡು ಈ ಮೂವರೂ ವಸೂಲಿ ದಂಧೆಗಿಳಿದಿದ್ದರು. ಅದರಲ್ಲೂ ಹೊರ ರಾಜ್ಯಗಳಾದ ಆಂಧ್ರ, ತಮಿಳುನಾಡು, ಕೇರಳದ ವಾಹನಗಳಿಂದ ಹೆಚ್ಚು ಹಣ ವಸೂಲಿ ಮಾಡುತ್ತಿದ್ದರು.
ಇವರ ವಸೂಲಿಯಿಂದ ಕಂಗೆಟ್ಟಿದ್ದ ಪ್ರವಾಸಿಗರು ಈ ದುಷ್ಕೃತ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಜೊತೆಗೆ ಈ ಸಿಬ್ಬಂದಿ ವಿರುದ್ಧ ಮುಖ್ಯ ವರಿಷ್ಠಾಧಿಕಾರಿಗಳಿಗೆ ದೂರು ಸಹ ನೀಡಲಾಗಿತ್ತು. ಈ ಕುರಿತು ಕ್ರಮ ಕೈಗೊಂಡಿರುವ ಪೊಲೀಸ್ ಇಲಾಖೆ ಮೂವರನ್ನೂ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ