EducationKannada NewsKarnataka NewsLatest

*ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಮೂವರು ಸಿಬ್ಬಂದಿ ಅಮಾನತ್ತು*

ಪ್ರಗತಿವಾಹಿನಿ ಸುದ್ದಿ: ಸಿಇಟಿ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ಭಾರಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿ ಅಮಾನತು ಮಾಡಲಾಗಿದೆ. 

ಸಿಬ್ಬಂದಿಯಾದ ಸುಧಾಕರ್, ಗಿರಿಜಮ್ಮ, ಆರ್​.ಸರಿತಾ ಸಸ್ಪೆಂಡ್​ ಆಗಿದ್ದಾರೆ. ಜನಿವಾರ ತೆಗೆಸಿದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರ ಡಿಸಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರ ಬರೆಯಲಾಗಿತ್ತು. 

ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದ್ರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸದಂತೆ ಸೂಚನೆ ನೀಡಲಾಗಿತ್ತು. ಆದ್ರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನೆಯಂತೆ ಕಂಡಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಪತ್ರ ಮುಖೇನೆ ಕೆಇಎ ಆಗ್ರಹಿಸಿತ್ತು.

Home add -Advt

Related Articles

Back to top button