Kannada NewsKarnataka News

*ಈಜಲು ಕಾಲುವೆಗೆ ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲು*

ಪ್ರಗತಿವಾಹಿನಿ ಸುದ್ದಿ: ಈಜಲು ಕಾಲುವೆಗೆ ತೆರಳಿದ್ದ ಮೂವರು ಬಾಲಕರು ಸಾವನ್ನಪ್ಪಿರುವ ಘಟನೆ ಮೈಸೂರಿನ ಸಾಲಿಗ್ರಾಮದ ಭಾಸ್ಕರ ದೇವಸ್ಥಾನದ ಬಳಿ ನಡೆದಿದೆ.

ಶಾಲೆಗೆ ರಜೆಯಿದ್ದ ಹಿನ್ನಲೆ ಮಕ್ಕಳು ಈಜಲು ತೆರಳಿದರು ಎನ್ನಲಾಗಿದೆ. ಮೃತ ಮಕ್ಕಳನ್ನು ಅಯಾನ್ (16), ಆಜಾನ್ (13), ಹಾಗೂ ಶಕಿಲ್ (14) ಎಂದು ಗುರುತಿಸಲಾಗಿದೆ. ಮೃತರ ಪೈಕಿ ಅಯಾನ್ ಹಾಗು ಅಜಾನ್ ಕೆಆರ್ ಪೇಟೆಯ ನವೋದಯ ಶಾಲೆಯಲ್ಲಿ ಓದುತ್ತಿದ್ದರು.

ಇತ್ತ ಮಕ್ಕಳು ಸಂಜೆಯಾದರೂ ಮನೆಗೆ ಬಾರದಿರುವುದನ್ನೂ ಕಂಡು ಪೋಷಕರು ಆತಂಕಗೊಂಡು ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮೂವರು ಮಕ್ಕಳ ಪೈಕಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಓರ್ವ ಬಾಲಕನಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

ಸದ್ಯ ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button