Kannada NewsKarnataka NewsLatest

*ಪ್ರವಾಸಕ್ಕೆ ಬಂದ ಮೂವರು ಕೆರೆಯಲ್ಲಿ ಮುಳಗಿ ಸಾವು*

ಪ್ರಗತಿವಾಹಿನಿ ಸುದ್ದಿ : ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರೋ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ ನಡೆದಿದೆ.

ಮೃತರನ್ನು ಬೆಂಗಳೂರಿನ ಆರ್.ಟಿ ನಗರದ ಬಾಲಕ ಮಹಮ್ಮದ್ ಹಯಾತ್, ಅಬ್ದುಲ್ ಖುದ್ದುಸ್ ಹಾಗೂ ಹೈದರ್ ಪಾಶಾ ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ 14 ಜನ ಕುಟುಂಬಸ್ಥರು ಪ್ರವಾಸಕ್ಕೆಂದು ವಿಜಯಪುರಕ್ಕೆ ಆಗಮಿಸಿದ್ದರು. ಈ ವೇಳೆ ಭೂತನಾಳ ಕೆರೆ ವೀಕ್ಷಣೆಗೆ ಹೋಗಿದ್ದರು. ಮೃತ ಬಾಲಕ ನೀರಿಗೆ ಇಳಿದು ಆಟವಾಡುವಾಗ ಮುಳುಗಿದ್ದಾನೆ. 

ಬಾಲಕನ ರಕ್ಷಣೆಗೆ ಇನ್ನಿಬ್ಬರು ನೀರಿಗೆ ಇಳಿದಿದ್ದಾರೆ. ಆದರೆ ರಕ್ಷಿಸಲಾಗದೇ ಇಬ್ಬರು ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ತೀವ್ರ ಅಸ್ವಸ್ಥರಾಗಿದ್ದಾರೆ. ಘಟನೆಯಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.

Home add -Advt

ಘಟನೆಯ ಸ್ಥಳಕ್ಕೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಶವಗಳನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಿದ್ದಾರೆ. ಈ ಸಂಬಂಧ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರವಾಸಕ್ಕೆ ಬಂದ ಕುಟುಂಬದಲ್ಲಿ ಸದ್ಯ ಸೂತಕದ ಛಾಯೆ ಆವರಿಸಿದ್ದು ಘಟನೆಯಿಂದ ಮೃತರ ಮನೆಯಲ್ಲಿ ನೀರವ ಮೌನ ಆವರಿಸಿದೆ.

Related Articles

Back to top button