
ಪ್ರಗತಿವಾಹಿನಿ ಸುದ್ದಿ: ಕುಡಿದು ರೈಲ್ವೇ ಹಳಿ ಮೇಲೆ ಮಲಗಿದ್ದವರ ಮೇಲೆ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
ನಿನ್ನೆ ರಾತ್ರಿ ರೈಲ್ವೇ ಟ್ರಾಕ್ ಮೇಲೆ ಮದ್ಯ ಸೇವಿಸಿ ಅಲ್ಲೇ ಮಲಗಿದ್ದಾಗ ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುತ್ತಿದ್ದ ರೈಲು ಏಕಾಏಕಿ ಯುವಕರ ಮೇಲೆ ಹರಿದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಮೌನೇಶ್ ಪತ್ತಾರ(23), ಸುನೀಲ್ (23), ವೆಂಕಟ ಭೀಮನಾಯ್ಕ (20) ಎಂದು ಗುರುತಿಸಲಾಗಿದ್ದು, ಸ್ನೇಹಿತರೆಲ್ಲ ಸೇರಿ ಪಾರ್ಟಿ ಮಾಡುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಸದ್ಯ ಗದಗ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಹಾಗೂ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ