
ಪ್ರಗತಿವಾಹಿನಿ ಸುದ್ದಿ: ಹಾಸನದದಲ್ಲಿ ಬೆಂಳ್ಳಂ ಬೆಳಗ್ಗೆ ಜವರಾಯ ಒಕ್ಕರಿಕೊಂಡಿದ್ದಾನೆ. ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಡೇಗೌಡನಹಳ್ಳಿ ಬಳಿ ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.
ಮೃತರನ್ನು ಇರ್ಫಾನ್ (25), ತರುಣ್ (26) ಹಾಗೂ ರೇವಂತ್ (27) ಎಂದು ಗುರುತಿಸಲಾಗಿದೆ. ಒಂದೇ ಬೈಕ್ ನಲ್ಲಿ ಮೂವರು ಯುವಕರು ಸಾಗುತ್ತಿದ್ದ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಮೂವರು ನೆಲಕ್ಕೆ ಬಿದ್ದಿದ್ದಾರೆ.
ಘಟನೆಯಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಇನ್ನಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಸದ್ಯ ಸ್ಥಳಕ್ಕೆ ಹಳ್ಳಿಮೈಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಾಗಿದೆ.