ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು, ಬಿಕ್ಕಟ್ಟಿನ ಈ ಸಂದರ್ಭದಲ್ಲಿ ಪಡಿತರ ಪಡೆಯಲು ನ್ಯಾಯಬೆಲೆ ಅಂಗಡಿಯಲ್ಲಿ ಬೆರಳಚ್ಚು ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಡಿತರ ಚೀಟಿದಾರರು ಹಾಗೂ ನ್ಯಾಯಬೆಲೆ ಅಂಗಡಿಗಳ ಮಾಲೀಕರ ಹಿತದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದ್ದು, ಮೇ ತಿಂಗಳ ಪಡಿತರ ಪಡೆಯಲು ಬೆರಳಚ್ಚು ಕಡ್ಡಾಯವಲ್ಲ. ಪಡಿತರ ಚೀಟಿದಾರರು ಆಧಾರ್ ಸಂಖ್ಯೆಯಡಿ ನೋಂದಾಯಿಸಿರುವ ಮೊಬೈಲ್ ಸಂಖ್ಯೆಗೆ ಒಟಿಪಿ ಕಳುಹಿಸಿ ಪಡಿತರ ವಿತರಿಸಲಾಗುವುದು ಎಂದು ಹೇಳಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ