Karnataka News

*ಸಿಡಿಲು ಬಡಿದು ಇಬ್ಬರು ಸಾವು*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ನಡುವೆ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಹಾವೇರಿ ಜಿಲ್ಲೆಯ ಹಾನಗಲ್ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗದಗ ಮೂಲದ ಮರಿಯವ್ವ ನಾಯ್ಕ್ (60) ಹಿರೆಕೇರೂರು ತಾಲೂಕಿನ ಡಮ್ಮಳ್ಳಿ ಗ್ರಾಮದ ನಾಗಪ್ಪ ಕನಸೋಗಿ (62) ಮೃತರು.

ಹಾನಗಲ್ ನ ಕೊಂಡೋಜಿ ಗ್ರಾಮದ ತೋಟದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಇವರು. ದೊಡ್ಡ ಕೆರೆ ಬಳಿ ದನಕಾಯಲು ಹೋದಾಗ ಭಾರಿ ಮಳೆಯಾಗಿದೆ. ಮಳೆಯಿಂದ ರಕ್ಷಿಸಿಕೊಳ್ಳಲು ಮರದ ಕೆಳಗೆ ನಿಂತಿದ್ದರು. ಈ ವೇಳೆ ಸಿಡಿಲು ಬಡಿದು ಮೃತಪಟ್ಟಿದ್ದಾರೆ.

ಹಾನಗಲ್ ಪೊಲೀಸ್ ಥಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

Related Articles

Back to top button