Belagavi NewsBelgaum NewsKannada NewsKarnataka News

*ಮುಂದಿನ 7 ದಿನ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ*

ಪ್ರಗತಿವಾಹಿನಿ ಸುದ್ದಿ : ಮುಂದಿನ 7 ದಿನಗಳ ಕಾಲ ರಾಜ್ಯದ ವಿವಿಧೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಬೀದರ್, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಕರಾವಳಿ ಭಾಗದಲ್ಲಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ವರುಣನ ಆರ್ಭಟ ಜೋರಾಗಿರಲಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನು ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಏಪ್ರಿಲ್ 25ರಿಂದ ಇಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳಿವೆ.

ಹಾಗೆಯೇ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರದ ಒಂದೆರಡು ಕಡೆಗಳಲ್ಲಿ ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಉಳಿದಂತೆ ಮೋಡ ಕವಿದ ವಾತಾವರಣವಿರಲಿದೆ ಎಂದು ಹೇಳಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 25 ಮತ್ತು  26 30-40 ಕಿಮೀ ವೇಗದ ಗಾಳಿಯೊಂದಿಗೆ, ಗುಡುಗು ಸಹಿತ ಮಳೆಯಾಗಲಿದೆ. ಇನ್ನುಳಿದಂತೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಅನೇಕ ಭಾಗಗಳಲ್ಲಿ ಬಿಸಿ, ತೇವಾಂಶದ ವಾವಾತವರಣ ಮುಂದುವರಿಯಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ಗದಗ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಆಲಿಕಲ್ಲು ಸಹ ಬೀಳಬಹುದು ಎನ್ನಲಾಗಿದೆ.

ಬೀದ‌ರ್, ರಾಯಚೂರು, ಹಾವೇರಿ, ಕೊಪ್ಪಳ, ಯಾದಗಿರಿ ಭಾಗಗಳಲ್ಲಿ ಬಿರುಗಾಳಿ ಸಹಿತ, ಮಧ್ಯಮ ಮಳೆಯಾಗಬಹುದು. ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button