ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅರ್ಚಕರನ್ನು ಬಂಧಿಸಿರುವ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಖಾಂಡ್ಯ ಗ್ರಾಮದ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕ ಕೃಷ್ಣಾನಂದ ಹೊಳ್ಳ ಹಾಗೂ ನಾಗೇಂದ್ರ ಜೋಯಿಸ ಬಂಧಿತರು. ಬಂಧಿತರಿಂದ ಹುಲಿ ಉಗುರಿನ ಮೂರು ಲಾಕೆಟ್ ವಶಕ್ಕೆ ಪಡೆಯಲಾಗಿದೆ.
ವ್ಯಕ್ತಿಯೊಬ್ಬರು ಇ-ಮೇಲ್ ಮೂಲಕ ಅರಣ್ಯ ಇಲಾಖೆಗೆ ಇಬ್ಬರು ಅರ್ಚಕರ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು ಇಬ್ಬರು ಅರ್ಚಕರನ್ನು ಬಂಧಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ