Wanted Tailor2
Cancer Hospital 2
Bottom Add. 3

*ಹುಲಿ ಉಗುರು ಕೇಸ್: ಅರಣ್ಯಾಧಿಕಾರಿಯೇ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣದಲ್ಲಿ ಸ್ವತ: ಅರಣ್ಯಾಧಿಕಾರಿಯೇ ಅರೆಸ್ಟ್ ಆಗಿರುವ ಘಟನೆ ನಡೆದಿದೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಬಂಧನ ಬೆನ್ನಲ್ಲೇ ಹುಲಿ ಉಗುರು ಪೆಂಡೆಂಟ್ ಹೊಂದಿದ್ದ ನಟರು, ನಿರ್ಮಾಪಕರು, ರಾಜಕಾರಣಿಗಳು, ರಾಜಕಾರಣಿಗಳ ಮಕ್ಕಳು ಸೇರಿದಂತೆ ಸಾಲು ಸಾಲು ಪ್ರಕರಣಗಳು ದಾಖಲಾಗುತ್ತಿದ್ದು, ಈಗ ಸ್ವತ: ಅರಣ್ಯಾಧಿಕಾರಿಯೇ ಬಂಧಿಸಲ್ಪಟ್ಟಿದ್ದಾರೆ.

ಚಿಕ್ಕಮಗಳೂರಿನ ಕಳಸದ ಡಿಆರ್ ಎಫ್ ಒ ದರ್ಶನ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಡಿಆರ್ ಎಫ್ ಒ ಗೆ ನೋಟಿಸ್ ನೀಡಿ ವಿಚಾರಣೆಗೆ ಹಜರಾಗುವಂತೆ ಸೂಚಿಸಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದೇ ಇದ್ದುದರಿಂದ ಡಿಆರ್ ಎಫ್ ಒ ಹುದ್ದೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿತ್ತು. ಅಮಾನತ್ತಾಗುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ದರ್ಶನ್ ಅವರನ್ನು ಚಿಕ್ಕಮಗಳೂರಿನ ಎನ್ ಆರ್ ಪುರದಲ್ಲಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.


Bottom Add3
Bottom Ad 2

You cannot copy content of this page